(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ–ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದೆ. ವಿದ್ಯಾರ್ಥಿಗಳಿಗೆ, ಅಭ್ಯರ್ಥಿಗಳಿಗೆ ಇದರಿಂದ ತೊಂದರೆಯಾಗದಂತೆ ಮಾಡಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದೆ.
ನಗರ ಜಿಲ್ಲೆಯಲ್ಲಿ ಪರೀಕ್ಷೆ, ನೇಮಕಾತಿ ಇನ್ನಿತರ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅಗತ್ಯ ಇರುವವರು ಸಹಾಯವಾಣಿ ಸಂಖ್ಯೆ 9019913319 ಸಂಪರ್ಕಿಸಬಹುದು. ಕೂಡಲೇ ಸ್ಪಂದಿಸಿ ಪ್ರಮಾಣಪತ್ರ ಒದಗಿಸಲಾಗುವುದು. ವಿದ್ಯಾರ್ಥಿಗಳು, ಪೋಷಕರು ಆತಂಕ ಪಡುವ ಅಗತ್ಯ ಇಲ್ಲ ಎಂದು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.