ADVERTISEMENT

ಹೇಮಾವತಿ ಲಿಂಕ್ ಕೆನಾಲ್:ಸಭೆ ಕರೆದು ಚರ್ಚಿಸಲು ಸಿಎಂ ಸಿದ್ದರಾಮಯ್ಯಗೆ ಸೋಮಣ್ಣ ಪತ್ರ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 7:53 IST
Last Updated 3 ಜೂನ್ 2025, 7:53 IST
ಸಚಿವ ವಿ. ಸೋಮಣ್ಣ
ಸಚಿವ ವಿ. ಸೋಮಣ್ಣ   

ಬೆಂಗಳೂರು: ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಫೀಡರ್ ಯೋಜನೆ ಕುರಿತಂತೆ ಚರ್ಚಿಸಲು ಆ ಭಾಗದ ಎಲ್ಲ ಜನಪ್ರತಿನಿಧಿಗಳ ಸಭೆ ಕರೆಯಲು ಕೇಂದ್ರ ಸಚಿವ ವಿ. ಸೋಮಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯ ಆಗುತ್ತಿದ್ದು, ತಕ್ಷಣವೇ ಈ ಯೋಜನೆಯ ಕಾಮಗಾರಿಯನ್ನು ನಿಲ್ಲಿಸುವಂತೆ ಸಾಕಷ್ಟು ಭಾರಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರೂ, ಅವರು ಈ ಬಗ್ಗೆ ಗಮನಹರಿಸದಿರುವುದು ಹಾಗೂ ಈ ಅನ್ಯಾಯದ ವಿರುದ್ಧ ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ.

ಈ ಯೋಜನೆಯಿಂದ ರೈತರಿಗೆ ಆಗುತ್ತಿರುವ ಅನ್ಯಾಯ, ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲು ಈ ಭಾಗದ ಎಲ್ಲಾ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಉಪಸ್ಥಿತಿಯಲ್ಲಿ ಏರ್ಪಡಿಸುವಂತೆ ಈ ಮೂಲಕ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಲ್ಲಿ ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.