ADVERTISEMENT

ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಶ್ರೀ ಹೆಸರಿಡಲು ಹಿಂದೇಟು: ಬಿಜೆಪಿ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಮಾರ್ಚ್ 2025, 12:53 IST
Last Updated 16 ಮಾರ್ಚ್ 2025, 12:53 IST
<div class="paragraphs"><p>ಬಿಜೆಪಿ</p></div>

ಬಿಜೆಪಿ

   

ಬೆಂಗಳೂರು: ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರಿಡಲು ಕಾಂಗ್ರೆಸ್‌ ಸರ್ಕಾರ ಅನುಮೋದನೆ ನೀಡುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ‘ಭಾಷೆ, ರಾಷ್ಟ್ರೀಯ ಪುರುಷರು, ಪುಣ್ಯ ಪುರುಷರು, ಉತ್ತರ – ದಕ್ಷಿಣ ಹೀಗೆ ಎಲ್ಲಾ ರೀತಿಯಿಂದಲೂ ವಿಭಜನಾತ್ಮಕವಾಗಿ ಟೀಕೆ ಮಾಡುತ್ತಿದ್ದ ಕಾಂಗ್ರೆಸ್ ಪಕ್ಷದ ಮುಖವಾಡ ಈಗ ಬಯಲಾಗಿದೆ’ ಎಂದು ಹೇಳಿದೆ.

ADVERTISEMENT

‘ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ, ಕಾಂಗ್ರೆಸ್‌ ಹಿರಿಯ ನಾಯಕ ದಿ. ಡಾ. ಮನಮೋಹನ್ ಸಿಂಗ್ ಅವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಆದರೆ, ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಮಠದ ಪೂಜ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರಿಡಲು ಕಾಂಗ್ರೆಸ್‌ ಸರ್ಕಾರ ಅನುಮೋದನೆ ನೀಡುತ್ತಿಲ್ಲ’ ಎಂದು ಬಿಜೆಪಿ ಆರೋಪಿಸಿದೆ.

‘ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವರು ನಾಲ್ಕು ಪತ್ರಗಳನ್ನು ಬರೆದರೂ ಕಾಂಗ್ರೆಸ್ ಸರ್ಕಾರ ಉತ್ತರಿಸದೆ ಸ್ವಾಮೀಜಿಗಳ ಹೆಸರಿನ ಬಗ್ಗೆ ಅಸಡ್ಡೆ ತೋರುತ್ತಿದೆ. ರಾಜ್ಯದ ವಿವಿಗೆ ಮನಮೋಹನ್ ಸಿಂಗ್ ಹೆಸರಿಡಲು ಅತ್ಯುತ್ಸಾಹ ತೋರುವ ಸಿದ್ದರಾಮಯ್ಯ ಸರ್ಕಾರ ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗೆಯ ಪೂಜ್ಯರ ಹೆಸರಿಡುವುದಕ್ಕೆ ಕಾಂಗ್ರೆಸ್ ಸರ್ಕಾರ ವಿರೋಧಿಸುತ್ತಿರುವುದೇಕೆ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.