ಬೆಳಗಾವಿ: ಸಂತೋಷ್ ಪಾಟೀಲ ಅವರ ಮನೆಗೆ ಸಚಿವ ಮುರುಗೇಶ ನಿರಾಣಿ ಭೇಟಿ ನೀಡಿ ಸಂತೋಷ್ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಪರವಾಗಿ ನಾನು ಇಲ್ಲಿಗೆ ಭೇಟಿ ನೀಡಿಲ್ಲ. ಮಾನವೀಯ ದೃಷ್ಟಿಯಿಂದ ಬಂದಿದ್ದೇವೆ. ಕುಟುಂಬದವರಿಗೆ ಸಾಂತ್ವನ ಹೇಳಿದ್ದೇನೆ. ಪೋಲಿಸ್ ಇಲಾಖೆ ತನಿಖೆ ನಡೆಸುತ್ತಿದೆ. ರಾಜೀನಾಮೆ ನೀಡುವಂತೆ ಈಶ್ವರಪ್ಪ ಅವರಿಗೆ ಹೈಕಮಾಂಡ್ ಸೂಚಿಸಿರಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದರು.
ಸಚಿವ ಕೆ.ಎಸ್. ಈಶ್ವರಪ್ಪ ಮೈಸೂರಿನಿಂದ ಬೆಂಗಳೂರಿನತ್ತ ದೌಡು
ಕುಟುಂಬದವರು ಸಂತೋಷ್ ಪತ್ನಿಗೆ ಸರ್ಕಾರಿ ನೌಕರಿಗಾಗಿ ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡುವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.