ADVERTISEMENT

ಲಾಕ್‌ಡೌನ್: ತಾಳ್ಮೆಯಿಂದ ವರ್ತಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಮೇ 2021, 6:30 IST
Last Updated 12 ಮೇ 2021, 6:30 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಮಾನದಂಡಗಳನ್ನು ಜಾರಿಗೊಳಿಸುವಾಗ ತಾಳ್ಮೆಯಿಂದ ವರ್ತಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಕೋವಿಡ್ ವಿಷಯಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಕಳೆದ ವರ್ಷ ಲಾಕ್‌ಡೌನ್ ಅವಧಿಯಲ್ಲಿ ಜಾರಿಗೊಳಿಸಿದ ಆದೇಶವನ್ನು ಈ ವರ್ಷವೂ ಅನ್ವಯಿಸುವಂತೆ ತಿಳಿಸಿತು.

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಹೊರ ಹೋಗುವ ಜನರ ವಿರುದ್ಧ ಲಾಠಿ ಬೀಸುತ್ತಿರುವುದನ್ನು ವಕೀಲರು ಉಲ್ಲೇಖಿಸಿದರು. ಸಂಯಮದಿಂದ ವರ್ತಿಸಲು ಸಂಬಂಧಪಟ್ಟವರಿಗೆ ತಿಳಿಸಲಾಗುವುದು ಎಂದು ಅಡ್ವೊಕೇಟ್ ಜನರಲ್ ಭರವಸೆ ನೀಡಿದರು.

ADVERTISEMENT

ಕಳೆದ ವರ್ಷದ ಲಾಕ್‌ಡೌನ್ ಸಂದರ್ಭದಲ್ಲಿ ಇದೇ ರೀತಿಯ ದೂರುಗಳು ಬಂದಾಗ 2020ರ ಮಾರ್ಚ್ 30ರಂದು ಹೊರಡಿಸಿದ ಆದೇಶವನ್ನು ಪೀಠ ನೆನಪಿಸಿತು. ‘ಲಾಠಿ ಬಳಸದೆ ನಾಗರಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ನಾಗರಿಕರು ಕೂಡ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.