ADVERTISEMENT

ವೈದ್ಯಕೀಯ ಕೋರ್ಸ್ ಶುಲ್ಕ ಹೆಚ್ಚಳ: ಮಾಹಿತಿ ಕೇಳಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 19:56 IST
Last Updated 15 ಜೂನ್ 2020, 19:56 IST
ರಾಜ್ಯ ಹೈಕೋರ್ಟ್
ರಾಜ್ಯ ಹೈಕೋರ್ಟ್   

ಬೆಂಗಳೂರು: 'ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕ ಹೆಚ್ಚಳ ಮಾಡಿರುವ ಬಗ್ಗೆ ಮಾಹಿತಿ ಒದಗಿಸಿ' ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ಹುಬ್ಬಳ್ಳಿಯ ದಿವಂಗತ ಜಿ.ಬಿ. ಕುಲಕರ್ಣಿ ಸ್ಮಾರಕ ಕಾನೂನು ಸಂಸ್ಥೆಯ ಅಧ್ಯಕ್ಷ ಡಾ. ವಿನೋದ್ ಕುಲಕರ್ಣಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹಾಗೂ ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

'ಶುಲ್ಕ ಹೆಚ್ಚಳ ಮಾಡಿರುವ ಮಾಹಿತಿ ಸಲ್ಲಿಸಿ' ಎಂದು ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ADVERTISEMENT

'ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕ ಹೆಚ್ಚಳ ಮಾಡಿರುವ ಸರ್ಕಾರದ ಆದೇಶ ರದ್ದುಪಡಿಸಬೇಕು. ಶುಲ್ಕ ನಿಯಂತ್ರಣ ಸಮಿತಿಗೆ ತಕ್ಷಣ ಅಧ್ಯಕ್ಷರನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು' ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಶುಲ್ಕ ನಿಯಂತ್ರಣ ಸಮಿತಿಗೆ ಅಧ್ಯಕ್ಷರನ್ನು ನೇಮಿಸಲು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್, ಈ ಹಿಂದಿನ ವಿಚಾರಣೆ ವೇಳೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.