ADVERTISEMENT

ಒಕ್ಕಲಿಗರ ಸಂಘದ ಚುನಾವಣೆ ಮುಂದೂಡಲು ಹೈಕೋರ್ಟ್ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 20:37 IST
Last Updated 23 ಏಪ್ರಿಲ್ 2021, 20:37 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕೋವಿಡ್ ಉಲ್ಬಣಗೊಂಡಿರುವ ಕಾರಣ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಮುಂದೂಡಲು ಹೈಕೋರ್ಟ್‌ ಸಮ್ಮತಿಸಿದೆ.

ಸಂಘಕ್ಕೆ ಚುನಾವಣೆ ನಡೆಸುವಂತೆ ಕೋರಿ ಚಿತ್ರ ನಿರ್ಮಾಪಕ ಕೃಷ್ನೇಗೌಡ ಸಲ್ಲಿಸಿದ್ದ ಅರ್ಜಿ ಸಂಬಂಧ ಮಾ.5ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಮೂರು ತಿಂಗಳೊಳಗೆ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅದರಂತೆ ಚುನಾವಣಾಧಿಕಾರಿಯನ್ನು ನೇಮಿಸಿ ಮೇ 16ಕ್ಕೆ ಚುನಾವಣೆಯನ್ನು ನಿಗದಿ ಮಾಡಲಾಗಿತ್ತು.

ಈ ನಡುವೆ ಕೋವಿಡ್ ವೇಗವಾಗಿ ಹರಡುತ್ತಿರುವ ಕಾರಣ ಚುನಾವಣೆ ಮುಂದೂಡುವುದು ಸೂಕ್ತ ಎಂದು ಚುನಾವಣಾಧಿಕಾರಿ ಸರ್ಕಾರಕ್ಕೆ ಪತ್ರ ಬರೆದಿದ್ದರು. ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದ ಸರ್ಕಾರ, ‘ಮೂರು ತಿಂಗಳಲ್ಲಿ ಚುನಾವಣೆ ನಡೆಸಬೇಕು ಎಂಬ ಆದೇಶದಿಂದ ವಿನಾಯಿತಿ ನೀಡಬೇಕು. ಮುಂದೂಡಲು ಅನುಮತಿ ನೀಡಬೇಕು’ ಎಂದು ಕೋರಿತ್ತು.

ADVERTISEMENT

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ಪೀಠ, ಚುನಾವಣೆ ಮುಂದೂಡಲು ಅನುಮತಿ ನೀಡಿತು. ‘ಕೋವಿಡ್ ಹತೋಟಿಗೆ ಬಂದ ನಂತರವೂ ಚುನಾವಣೆ ನಡೆಸದಿದ್ದರೆ ಅರ್ಜಿದಾರರು ನ್ಯಾಯಾಲಯದಲ್ಲಿ ಮತ್ತೆ ಪ್ರಶ್ನಿಸಬಹುದು’ ಎಂದು ತಿಳಿಸಿ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.