ADVERTISEMENT

ಅಜೀಂ ಪ್ರೇಮ್ ಜಿ ವಿರುದ್ಧದ ಸಮನ್ಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 16 ಮೇ 2020, 20:15 IST
Last Updated 16 ಮೇ 2020, 20:15 IST
ಅಜೀಂ ಪ್ರೇಮ್‌ ಜಿ
ಅಜೀಂ ಪ್ರೇಮ್‌ ಜಿ    

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಅಜೀಂ ಪ್ರೇಮ್ ಜಿ ವಿರುದ್ಧದ ಸಮನ್ಸ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ಸಮನ್ಸ್ ರದ್ದು ಕೋರಿ ಅಜೀಂ ಪ್ರೇಮ್ ಜಿ ದಂಪತಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾ ಮಾಡಿದೆ.

'ಅಜೀಂ ಪ್ರೇಮ್ ಜಿ ತಮ್ಮ ಒಡೆತನಕ್ಕೆ ಸೇರಿದ ನಾಲ್ಕು ಕಂಪನಿಗಳನ್ನು ಒಂದೇ ಕಂಪನಿ ವ್ಯಾಪ್ತಿಗೆ ತಂದಿರುವುದು ಕಾನೂನು ಬಾಹಿರ. ಈ ಕಂಪನಿಗಳ ಆಸ್ತಿ ಸರ್ಕಾರಕ್ಕೆ ಸೇರಬೇಕು' ಎಂದು ಆರೋಪಿಸಿ ಚೆನ್ನೈನ 'ಇಂಡಿಯಾ ಅವೇಕ್ ಫಾರ್ ಟ್ರಾನ್ಸ್ ಪರೆನ್ಸಿ' ಹೆಸರಿನ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆ ಬೆಂಗಳೂರಿನಲ್ಲಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿತ್ತು.

ADVERTISEMENT

'ಈ ದೂರಿನಲ್ಲಿ ಸಂಜ್ಞೇಯ ಅಪರಾಧದ ಆರೋಪಗಳಿವೆ' ಎಂದು ಪರಿಗಣಿಸಿ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಅಜೀಂ ಪ್ರೇಮ್ ಜಿ ಈ ಸಮನ್ಸ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅಜೀಂ ಪ್ರೇಮ್ ಜಿ ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ವಂಚನೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಲೋಕಾಯಯಕ್ತ ನ್ಯಾಯಾಲಯದಲ್ಲಿ ಮೂರು ಖಾಸಗಿ ದೂರುಗಳನ್ನು ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.