ADVERTISEMENT

ಪ್ರಜ್ವಲ್‌ ರೇವಣ್ಣ: ಸದಸ್ಯತ್ವ ಅಸಿಂಧು ಕೋರಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 26 ಜೂನ್ 2019, 20:09 IST
Last Updated 26 ಜೂನ್ 2019, 20:09 IST
   

ಬೆಂಗಳೂರು: ‘ವಾಸ್ತವ ಆದಾಯ ಬಚ್ಚಿಟ್ಟು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಲೋಕಸಭಾ ಚುನಾವಣೆಯಲ್ಲಿ ಹಾಸನ ಸಂಸತ್‌ ಕ್ಷೇತ್ರದಿಂದ ಗೆದ್ದಿರುವ ಪ್ರಜ್ವಲ್‌ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಲಾಗಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ಸ್ಪರ್ಧಿಸಿ ಪರಾಜಯಗೊಂಡಿರುವ ಬಿಜೆಪಿಯ ಎ.ಮಂಜು ಅರ್ಜಿ ಸಲ್ಲಿಸಿದ್ದು ಇದಿನ್ನೂ ವಿಚಾರಣೆಗೆ ಬರಬೇಕಿದೆ.

‘ಆದಾಯ ತೆರಿಗೆ ವಿವರಗಳಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ದಾಖಲೆ ಸುಳ್ಳು ಅಂಕಿ ಅಂಶಗಳಿಂದ ಕೂಡಿದೆ’ ಎಂಬುದು ಅರ್ಜಿದಾರರ ವಾದ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.