ADVERTISEMENT

ಅಪೌಷ್ಟಿಕತೆ: ರಾಜ್ಯ ಸರ್ಕಾರಕ್ಕೆ ಮಾಹಿತಿ ಕೇಳಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 19:30 IST
Last Updated 27 ಜನವರಿ 2022, 19:30 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲಗೌಡ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಮಧ್ಯಂತರ ಶಿಫಾರಸುಗಳನ್ನು ಜಾರಿಗೆ ತಂದಿರುವ ಬಗ್ಗೆ ಮೂರು ವಾರಗಳಲ್ಲಿ ವರದಿ ಸಲ್ಲಿಸಬೇಕು‘ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿ 2011ರಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಇದೇ ವೇಳೆ, ‘ರಾಜ್ಯಕ್ಕೆ ಹೆಚ್ಚುವರಿಯಾಗಿ 4,244 ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮೂರು ವಾರಗಳಲ್ಲಿ ಮಾಹಿತಿ ನೀಡಿ‘ ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಫೆಬ್ರುವರಿ 18ಕ್ಕೆ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.