ADVERTISEMENT

ಸಿಬ್ಬಂದಿಗೆ ಕಾಲಕಾಲಕ್ಕೆ ತರಬೇತಿ: ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 4:38 IST
Last Updated 16 ಸೆಪ್ಟೆಂಬರ್ 2020, 4:38 IST
   

ಬೆಂಗಳೂರು:ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ರೋಗಗಳ ನಿಯಂತ್ರಣ ಕಾಯ್ದೆಯಡಿ ರೂಪಿಸಿರುವ ನಿಬಂಧನೆಗಳನ್ನು ಕಾರ್ಯಗತಗೊಳಿಸಲು ನೇಮಕಗೊಂಡಿರುವ ಸಿಬ್ಬಂದಿಗೆ ಕಾಲಕಾಲಕ್ಕೆ ತರಬೇತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮಾಜಿ ಶಾಸಕ ಡಾ. ಸಾರ್ವಭೌಮ ಎಸ್. ಬಗಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಆಧರಿಸಿ ಅರ್ಜಿಯನ್ನು ಪೀಠ ವಿಲೇವಾರಿ ಮಾಡಿತು.

‘ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಈ ರೀತಿಯ ರೋಗಗಳಿಗೆ ಚಿಕಿತ್ಸೆ ನೀಡುವ ಕೇಂದ್ರಗಳು ಹೆಚ್ಚಾಗಿ ತಲೆ ಎತ್ತುತ್ತಿವೆ. ಪಕ್ಕದ ಮಹಾರಾಷ್ಟ್ರ ರಾಜ್ಯದ ಜನರು ಇಲ್ಲಿಗೆ ಹೆಚ್ಚಾಗಿ ಭೇಟಿ ನೀಡುತ್ತಿದ್ದಾರೆ. ಯಾವುದೇ ಕಾನೂನುಗಳೂ ಇಲ್ಲಿ ಪಾಲನೆಯಾಗುತ್ತಿಲ್ಲ’ ಎಂದು ಅರ್ಜಿದಾರರು ದೂರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.