ADVERTISEMENT

ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಸರ್ಕಾರ ಕಾಳಜಿ ವಹಿಸುತ್ತಿಲ್ಲ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2019, 19:43 IST
Last Updated 6 ನವೆಂಬರ್ 2019, 19:43 IST
   

ಬೆಂಗಳೂರು: ‘ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಸರ್ಕಾರ ಕಾಳಜಿ ವಹಿಸುತ್ತಿಲ್ಲ. ಈ ನಿಟ್ಟಿನಲ್ಲಿ ಬೇಕಂತಲೇ ವಿಳಂಬ ನೀತಿ ಅನುಸರಿಸಲಾಗುತ್ತಿದೆ’ ಎಂದು ಹೈಕೋರ್ಟ್ ಅತೃಪ್ತಿ ವ್ಯಕ್ತಪಡಿಸಿದೆ.

ಕುರಿತಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ಮಕ್ಕಳು ಯಾವ ಜಿಲ್ಲೆಗಳಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಶಾಲೆಯಿಂದ ಹೊರಗುಳಿದಿದ್ದರೊ ಆ ಜಿಲ್ಲೆಗಳಲ್ಲಿ ಮೊದಲ ಆದ್ಯತೆ ನೀಡಿ ಸಂಯೋಜನಾಧಿಕಾರಿ ನೇಮಕ ಮಾಡಿ’ ಎಂದು ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 13ಕ್ಕೆ ಮುಂದೂಡಿದೆ.

ADVERTISEMENT

ನ.26 ಸಂವಿಧಾನ ದಿನ ಆಚರಣೆ: ಸಿ.ಎಂಗೆ ಪತ್ರ
ಬೆಂಗಳೂರು: ನವೆಂಬರ್‌ 26 ರಂದು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು, ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನದ ದಿನವನ್ನು ಆಚರಿಸಲು ಸೂಕ್ತ ನಿರ್ದೇಶನ ನೀಡುವಂತೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪಯವರಿಗೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.