ADVERTISEMENT

ಕಾರಾಗೃಹಗಳ ವಸ್ತುಸ್ಥಿತಿಗೆ ಹೈಕೋರ್ಟ್ ಅತೃಪ್ತಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2019, 8:40 IST
Last Updated 26 ನವೆಂಬರ್ 2019, 8:40 IST
   

ಬೆಂಗಳೂರು:ರಾಜ್ಯದಲ್ಲಿನ ಕಾರಾಗೃಹಗಳ ವಸ್ತುಸ್ಥಿತಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಕಾರಾಗೃಹಗಳಲ್ಲಿನ ಪರಿಸ್ಥಿತಿ ಅವಲೋಕನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕಾರಾಗೃಹಗಳಿಗೆ ಮಂಜೂರಾಗಿರುವ ಒಟ್ಟು ಸಿಬ್ಬಂದಿ, ಸದ್ಯ ಖಾಲಿಯಿರುವ ಸಿಬ್ಬಂದಿ ಪ್ರಮಾಣ, ಜೈಲಿನಲ್ಲಿರುವ ಕೈದಿಗಳ ಮಕ್ಕಳಿಗೆ ಸೂಕ್ತ ಶಿಕ್ಷಣ ಕಲ್ಪಿಸುವ ವಿಚಾರ ಹಾಗೂ ಕೈದಿಗಳಿಗೆ ಒದಗಿಸುತ್ತಿರುವ ಆಹಾರದ ಗುಣಮಟ್ಟ, ಅಡುಗೆ ಮನೆಯ ನೈರ್ಮಲ್ಯದ ಬಗ್ಗೆ ಸೂಕ್ತ ಮಾಹಿತಿ ನೀಡದ ಸರ್ಕಾರದ ವೈಖರಿಗೆ ನ್ಯಾಯಪೀಠ ಅತೃಪ್ತಿ ವ್ಯಕ್ತಪಡಿಸಿತು.

ADVERTISEMENT

‘ಈ ಕುರಿತು ಸಮಗ್ರ ಮಾಹಿತಿಯನ್ನು ಡಿ.16ರ ಒಳಗೆಒದಗಿಸಬೇಕು’ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.