ADVERTISEMENT

ಚನ್ನಪಟ್ಟಣ: ಒಳಚರಂಡಿ ವ್ಯವಸ್ಥೆಗಾಗಿ ಹೈಕೋರ್ಟ್‌ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 5:37 IST
Last Updated 24 ಜೂನ್ 2021, 5:37 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಚನ್ನಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲುಹೈಕೋರ್ಟ್ ಆದೇಶಿಸಿದೆ.

ಎಂ.ಕೆ. ಚಂದ್ರಶೇಖರ್ ಮತ್ತು ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್‌ಪಿಸಿಬಿ), ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರಕ್ಕೂ ನೋಟಿಸ್ ನೀಡಲು ಆದೇಶಿಸಿದೆ.

‘ಮಳೆ ನೀರು ಹರಿಯುವ ಚರಂಡಿ ಒತ್ತುವರಿ ತೆರವುಗೊಳಿಸಲು ಮತ್ತು ರೇಷ್ಮೆ ನೂಲು ತಯಾರಿಕಾ ಕೈಗಾರಿಕೆಗಳು ಚರಂಡಿಗಳಿಗೆ ಕೊಳಚೆ ನೀರು ಹರಿ ಬಿಡುತ್ತಿರುವುದನ್ನು ತಡೆಗಟ್ಟಲು ಅಧಿಕಾರಿಗಳು ವಿಫಲರಾಗಿದ್ದಾರೆ. ಹಲವು ಬಾರಿ ಮನವಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅರ್ಜಿದಾರರು ದೂರಿದರು.

ADVERTISEMENT

ತೆರೆದ ಚರಂಡಿಗಳು ಸೊಳ್ಳೆಗಳ ಸಂತಾನೋತ್ಪತ್ತಿ ಕೇಂದ್ರವಾಗಿ ಮಾರ್ಪಟ್ಟಿವೆ. ನೀರು ಮಲೀನಗೊಳ್ಳುತ್ತಿರುವುದನ್ನು ತಡೆಗಟ್ಟದಿದ್ದರೆ ಕಣ್ವ ನದಿ ಕೂಡ ಬೆಂಗಳೂರಿನ ವೃಷಭಾವತಿ ನದಿಯಂತೆಯೇ ಆಗಲಿದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದರು.

ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕು ಮತ್ತು ಒಳಚರಂಡಿ ಸಂಸ್ಕರಣಾ ಘಟಕ ಸ್ಥಾಪಿಸಲು ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.