ADVERTISEMENT

ಎಪಿಪಿ ಹುದ್ದೆ ಭರ್ತಿಗೆ ಗಡುವು: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2022, 19:31 IST
Last Updated 7 ಜೂನ್ 2022, 19:31 IST
ಹೈಕೋರ್ಟ್
ಹೈಕೋರ್ಟ್    

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 205 ಅಸಿಸ್ಟೆಂಟ್‌ ಪಬ್ಲಿಕ್‌ ಪ್ರಾಸಿಕ್ಯೂಟರ್ (ಎಪಿಪಿ) ಹುದ್ದೆಗಳ ಭರ್ತಿಗೆ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಲು ಸರ್ಕಾರಕ್ಕೆ ಹೈಕೋರ್ಟ್ ಆರು ವಾರಗಳ ಗಡುವು ವಿಧಿಸಿದೆ.

ಈ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು,ಎರಡು ತಿಂಗಳು ಕಾಲಾವಕಾಶ ಕೊಟ್ಟರೆ ಪರೀಕ್ಷೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಕೋರಿದರು. ಇದಕ್ಕೆ ನ್ಯಾಯಪೀಠ, ‘ಈಗಾಗಲೇ ಸಾಕಷ್ಟು ಹೆಚ್ಚಿನ ಸಮಯ ನೀಡಲಾಗಿದೆ. ಆರು ವಾರಗಳಲ್ಲಿ ಪರೀಕ್ಷೆ ನಡೆಸಿ, ಫಲಿತಾಂಶ ಪ್ರಕಟಿಸಬೇಕು. ತಪ್ಪಿದರೆ ಪ್ರಾಸಿಕ್ಯೂಷನ್‌ ಇಲಾಖೆಯ ನಿರ್ದೇಶಕರು ಮುಂದಿನ ವಿಚಾರಣೆಗೆ ಖುದ್ದು ಹಾಜರಿರಬೇಕು’ ಎಂದು ಸೂಚಿಸಿ ವಿಚಾರಣೆ ಮುಂದೂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.