ADVERTISEMENT

ಜಂತಕಲ್ ಮೈನಿಂಗ್ ಪ್ರಕರಣ: ಜಾಮೀನು ಷರತ್ತು ಸಡಿಲಿಸಲು ಎಚ್‌ಡಿಕೆ ಅರ್ಜಿ

ಅಕ್ರಮ ಗಣಿಗಾರಿಕೆ ಪರವಾನಿಗೆ ನೀಡಿದ ಆರೋಪ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2019, 20:07 IST
Last Updated 15 ಮಾರ್ಚ್ 2019, 20:07 IST
   

ಬೆಂಗಳೂರು: ‘ಜಂತಕಲ್ ಮೈನಿಂಗ್‌ ಕಂಪನಿಗೆ ಅಕ್ರಮವಾಗಿ ಗಣಿಗಾರಿಕೆ ಪರವಾನಿಗೆ ನೀಡಿದ ಆರೋಪ ಪ್ರಕರಣದಲ್ಲಿ ಜಾಮೀನು ಷರತ್ತು ಸಡಿಲಿಕೆ ಮಾಡಿ’ ಎಂದು ಕೋರಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಲ್ಲಿನ ಜನಪ್ರತಿನಿಧಿಗಳ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯನ್ನು ಕುಮಾರಸ್ವಾಮಿ ಪರ ಹಿರಿಯ ವಕೀಲ ಹಷ್ಮತ್‌ ಪಾಷ ಅವರು ಶುಕ್ರವಾರ, ’ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ಕ್ಕೆ ಸಲ್ಲಿಸಿದರು.

‘ದೇಶ ಬಿಟ್ಟು ತೆರಳದಂತೆ ವಿಧಿಸಲಾಗಿರುವ ಷರತ್ತನ್ನು ಸಡಿಲಿಸಬೇಕು. ಈಗಾಗಲೇ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಚಾರಣೆ ಮುಕ್ತಾಯಗೊಳಿಸಿದೆ’ ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.

ADVERTISEMENT

ನ್ಯಾಯಾಧೀಶರು ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.