ADVERTISEMENT

ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳ ನೇಮಕ: ಕೊಲಿಜಿಯಂ ಶಿಫಾರಸು

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 17:19 IST
Last Updated 15 ಸೆಪ್ಟೆಂಬರ್ 2025, 17:19 IST
ಕೋರ್ಟ್ (ಸಾಂದರ್ಭಿಕ ಚಿತ್ರ)
ಕೋರ್ಟ್ (ಸಾಂದರ್ಭಿಕ ಚಿತ್ರ)   

ನವದೆಹಲಿ: ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸುವ ಪ್ರಸ್ತಾವನೆಗೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಸೋಮವಾರ ಅನುಮೋದನೆ ನೀಡಿದೆ. 

ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ನೇತೃತ್ವದ ಐವರು ನ್ಯಾಯಮೂರ್ತಿಗಳ ಕೊಲಿಜಿಯಂ ಸೋಮವಾರ ಸಭೆ ಸೇರಿ ಈ ಶಿಫಾರಸು ಮಾಡಿದೆ. 

ನ್ಯಾಯಾಂಗ ಅಧಿಕಾರಿಗಳಾದ ಗೀತಾ ಭರತರಾಜ ಶೆಟ್ಟಿ ಕಡಬ, ಮುರಳೀಧರ ಪೈ ಬೊರ್ಕಟ್ಟೆ ಹಾಗೂ ತ್ಯಾಗರಾಜ ನಾರಾಯಣ ಇನವಳ್ಳಿ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. 

ADVERTISEMENT

ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿ ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಅವರನ್ನು ಕಾಯಂ ನ್ಯಾಯಮೂರ್ತಿಯನ್ನಾಗಿ ನೇಮಿಸುವ ಪ್ರಸ್ತಾವಕ್ಕೂ ಕೊಲಿಜಿಯಂ ಅನುಮೋದನೆ ಕೊಟ್ಟಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.