ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿರುವ ಅನಧಿಕೃತ ಧಾರ್ಮಿಕ ಕೇಂದ್ರಗಳ ಮೇಲೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಅವರು ಕೆಂಗಣ್ಣು ಬೀರಿದ್ದಾರೆ.
‘ರಾಜ್ಯದಾದ್ಯಂತ ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ದಿಸೆಯಲ್ಲಿ ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂಬುದನ್ನು ತಿಳಿಯುವ ಬಗ್ಗೆ ವಿಚಾರಣೆ ನಡೆಸೋಣ. ಅದಕ್ಕಾಗಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಿ’ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಆದೇಶಿಸಿದ್ದಾರೆ.
‘ಮಾಗಡಿ ರಸ್ತೆಯ ಪೊಲೀಸ್ ವಸತಿ ನಿಲಯ ಪ್ರದೇಶದಲ್ಲಿ ಅಕ್ರಮವಾಗಿ ಸಾಯಿಬಾಬಾ ದೇವಸ್ಥಾನ ನಿರ್ಮಿಸಲಾಗುತ್ತಿದೆ’ ಎಂದು ಆಕ್ಷೇಪಿಸಿ ಎಸ್.ರವಿಚಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.