ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಜಾ ಮಾಡಿ ಆದೇಶಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಸಂಪಾಜೆ ನಿವಾಸಿಯಾದ ಎನ್.ಮೋಹನ್ ನಾಯಕ್ಗೆ ಈ ಮೊದಲು ವಿಚಾರಣಾ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತ್ತು.
ಗೌರಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಕುಂಬಳಗೋಡಿನಲ್ಲಿ ಬಾಡಿಗೆ ಮನೆ ಮಾಡಿ ಆಶ್ರಯ ನೀಡಿದ್ದ ಆರೋಪವನ್ನು ಮೋಹನ್ ನಾಯಕ್ ಎದುರಿಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.