ADVERTISEMENT

ಅರ್ಜಿ ಹಿಂದಕ್ಕೆ ಪಡೆದ ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 17:37 IST
Last Updated 9 ಆಗಸ್ಟ್ 2021, 17:37 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು:ಗುರುಮಿಠಕಲ್ ಕ್ಷೇತ್ರದ ಜೆಡಿಎಸ್‌ ಶಾಸಕ ನಾಗನಗೌಡ ಕಂದಕೂರ ಅವರನ್ನು ಬಿಜೆಪಿಗೆ ಸೆಳೆಯಲು ₹10 ಕೋಟಿ ಲಂಚದ ಆಮಿಷವೊಡ್ಡಿದ್ದ ಆರೋಪದಲ್ಲಿ ದಾಖಲಾಗಿದ್ದ ದೂರು ರದ್ದುಪಡಿಸುವಂತೆ ಕೋರಿ ಶಾಸಕರಾದ ಬಿ.ಎಸ್. ಯಡಿಯೂರಪ್ಪ, ಶಿವನಗೌಡ ಪಾಟೀಲ, ಪ್ರೀತಂಗೌಡ ಅವರು ಹೈಕೋರ್ಟ್‌ಗೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಗಳನ್ನು ಹಿಂಪಡೆದಿದ್ದಾರೆ.

ಅರ್ಜಿ ಹಿಂಪಡೆಯುವುದಾಗಿ ಆವರ ಪರ ವಕೀಲರು ಮೆಮೊ ಸಲ್ಲಿಸಿದ್ದರು. ನ್ಯಾಯಮೂರ್ತಿ ಸುನೀಲ್‌ ದತ್ತ ಯಾದವ್ ಅವರಿದ್ದ ಪೀಠ, ಹಿಂಪಡೆಯಲು ಅನುಮತಿ ನೀಡಿತು.‌

ಆಮಿಷವೊಡ್ಡಿದ್ದ ಆರೋಪದಲ್ಲಿ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಶರಣಗೌಡ ದೂರು ಸಲ್ಲಿಸಿದ್ದರು. ಅದನ್ನು ರದ್ದುಪಡಿಸುವಂತೆ ಕೋರಿ ತಕಾರರು ಅರ್ಜಿಗಳನ್ನು ಯಡಿಯೂರಪ್ಪ ಮತ್ತು ಇತರರು ಸಲ್ಲಿಸಿದ್ದರು. ದೇವದುರ್ಗ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಮುಂದಿನ ಪ್ರಕ್ರಿಯೆಗೆ ತಡೆಯಾಜ್ಞೆಯನ್ನು ಪೀಠ ನೀಡಿತ್ತು. ಶರಣಗೌಡ ಅವರ ಮಧ್ಯಂತರ ಅರ್ಜಿ ಆಧರಿಸಿ ಮಾ.31ರಂದು ತಡೆಯಾಜ್ಞೆ ತೆರವುಗೊಳಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.