ADVERTISEMENT

‘ನಿಖಿಲ್ ವಿವಾಹ: ವಾಹನ ಪಾಸ್ ವಿವರ ಸಲ್ಲಿಸಿ’

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2020, 21:58 IST
Last Updated 29 ಏಪ್ರಿಲ್ 2020, 21:58 IST
   

ಬೆಂಗಳೂರು: ‘ಲಾಕ್‌ಡೌನ್ ಅವಧಿ ವೇಳೆ ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಫಾರ್ಮ್‌ ಹೌಸ್‌ನಲ್ಲಿ ನಡೆದ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ವಿವಾಹ ಸಮಾರಂಭಕ್ಕೆ ಸಂಬಂಧಿಸಿದಂತೆ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು ಎಂಬ ಬಗ್ಗೆ ವರದಿ ಸಲ್ಲಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಲಾಕ್‌ಡೌನ್‌ನಿಂದಾಗಿರುವ ತಾಪತ್ರಯಗಳಿಗೆ ಸಂಬಂಧಿಸಿ ಸಲ್ಲಿಸಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ‌ನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ವಕೀಲ ಜಿ‌.ಆರ್.ಮೋಹನ್, ‘ಮದುವೆಯಲ್ಲಿ ಅಂತರ ಕಾಯ್ದುಕೊಂಡಿಲ್ಲ.‌‌‌ ಸರ್ಕಾರ ನೀಡಿದ ವಾಹನಗಳ ಪಾಸ್ ದುರ್ಬಳಕೆ ಮಾಡಿಕೊಳ್ಳಲಾಗಿದೆ’ ಎಂದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಕುರಿತಂತೆ ಮೇ 5ರಂದು ಲಿಖಿತ ವರದಿ ಸಲ್ಲಿಸಿ ಎಂದು ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.