ಬೆಂಗಳೂರು: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿನ 92 ಸಹಾಯಕ ಸಿವಿಲ್ ಎಂಜಿನಿಯರ್‌ಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ ಆಧರಿಸಿ ಈ ನೇಮಕಾತಿ ಮಾಡಲಾಗುತ್ತಿದೆ.
ಈ ಸಂಬಂಧ ತಿಪಟೂರಿನ ಎಚ್.ಆರ್.ಸಾಗರ್, ಮೈಸೂರಿನ ಡಿ.ಪ್ರಜ್ವಲ್ ಕುಮಾರ್ ಮತ್ತು ಜಿ.ಎಂ.ಪುರುಷೋತ್ತಮ ಗೌಡ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಯಮೂರ್ತಿ
ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಇದೇ ವೇಳೆ, ‘ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆ ಮುಂದು ವರಿಸಬಹುದು. ಆದರೆ, ನ್ಯಾಯಾಲಯದ ಅನುಮತಿಯಿಲ್ಲದೆ ಅಂತಿಮ ಫಲಿತಾಂಶ ಪ್ರಕಟಿಸುವಂತಿಲ್ಲ’ ಎಂದು ನ್ಯಾಯಪೀಠ ನಿರ್ದೇಶಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.