ADVERTISEMENT

ಉಪ ಲೋಕಾಯುಕ್ತ–1ರ ಹುದ್ದೆ ಭರ್ತಿ ಕೋರಿ ಪಿಐಎಲ್‌: ನೋಟಿಸ್‌

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2022, 5:43 IST
Last Updated 9 ಆಗಸ್ಟ್ 2022, 5:43 IST
ಹೈಕೋರ್ಟ್‌
ಹೈಕೋರ್ಟ್‌    

ಬೆಂಗಳೂರು: ‘ಖಾಲಿಯಿರುವ ಉಪಲೋಕಾಯುಕ್ತ-1ರ ಹುದ್ದೆಯನ್ನು ತುರ್ತಾಗಿ ಭರ್ತಿ ಮಾಡಲು ನಿರ್ದೇಶಿಸಬೇಕು’ ಎಂದು ಕೋರಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ವಕೀಲ ಎಸ್.ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಸೇವಾ ನಿಯಮಗಳು) ಇಲಾಖೆ ಹೆಚ್ಚುವರಿ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ADVERTISEMENT

ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ಎಸ್.ವಿಶ್ವನಾಥ್ ಶೆಟ್ಟಿ 2022ರ ಜನವರಿ ಕೊನೆಯಲ್ಲಿ ನಿವೃತ್ತಿ ಹೊಂದಿದ್ದರು. ಈ ಹುದ್ದೆಗೆ ಉಪ ಲೋಕಾಯುಕ್ತ-1ರ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರನ್ನು ನೇಮಕ ಮಾಡಲಾಗಿತ್ತು. ಈ ಕಾರಣದಿಂದ 2022ರ ಜೂನ್‌ 14ರಿಂದ ಉಪ ಲೋಕಾಯುಕ್ತ-1 ಹುದ್ದೆ ಖಾಲಿಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.