ADVERTISEMENT

ಕಾಮೆಡ್‌–ಕೆ ಪರೀಕ್ಷೆ ಮುಂದೂಡಲು ಹೈಕೋರ್ಟ್‌ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 17:14 IST
Last Updated 11 ಆಗಸ್ಟ್ 2020, 17:14 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಇದೇ 19ರಂದು ನಿಗದಿಯಾಗಿರುವ ಕಾಮೆಡ್‌–ಕೆ ಪರೀಕ್ಷೆ ಮುಂದೂಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ವಕೀಲ ಅಬ್ದುಲ್ ಮನ್ನಾನ್ ಖಾನ್ ಎಂಬುವರು ಅರ್ಜಿ ಸಲ್ಲಿಸಿದ್ದು, ಈ ವಾರವೇ ವಿಚಾರಣೆಗೆ ಬರುವ ಸಾಧ್ಯತೆ ಇದೆ. ‘70 ಸಾವಿರದಿಂದ 80 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇನ್ನೊಂದೆಡೆಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ವಿದ್ಯಾರ್ಥಿಗಳಿಗೆ ಹರಡುವ ಸಾಧ್ಯತೆ ಇದೆ. ಹೀಗಾಗಿ, ಪರೀಕ್ಷೆ ಮುಂದೂಡಬೇಕು’ ಎಂದು ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT