ADVERTISEMENT

ಹೆಚ್ಚುವರಿ ಲಸಿಕೆ‌: ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 21:30 IST
Last Updated 9 ಜುಲೈ 2021, 21:30 IST
ಹೈಕೋರ್ಟ್
ಹೈಕೋರ್ಟ್    

ಬೆಂಗಳೂರು: ಜುಲೈ ಮತ್ತು ಆಗಸ್ಟ್ ತಿಂಗಳಿಗೆ ಅಗತ್ಯ ಇರುವ ಎರಡನೇ ಡೋಸ್ ಕೋವಿಡ್ ಲಸಿಕೆಯ ಪ್ರಮಾಣ ಎಷ್ಟು ಎಂಬುದರ ವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಅಮಿಕಸ್ ಕ್ಯೂರಿ ವಿಕ್ರಮ್ ಹುಯಿಲ ಗೋಳ ಸಲ್ಲಿಸಿದ್ದ ವರದಿ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.

‘ಮೊದಲ ಡೋಸ್ ಲಸಿಕೆಯನ್ನು ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸಾಕಷ್ಟು ಜನ ಪಡೆದಿದ್ದಾರೆ. ರಾಜ್ಯ ಸರ್ಕಾರವೇ ಬಿಡುಗಡೆ ಮಾಡಿರುವ ಮಾಧ್ಯಮ ಪ್ರಕಟಣೆ ಪ್ರಕಾರ, 2.4 ಕೋಟಿ ಜನರು ಮೊದಲ ಡೋಸ್ ಮತ್ತು 44 ಲಕ್ಷ ಜನ ಎರಡನೇ ಡೋಸ್ ಪಡೆದಿದ್ದಾರೆ. ಲಸಿಕೆ ಹಂಚಿಕೆಯ ಪ್ರಮಾಣ ಗಮನಿ ಸಿದರೆ ಜುಲೈ ತಿಂಗಳಿಗೆ 44.77 ಲಕ್ಷ ಡೋಸ್ ಕೋವಿಶೀಲ್ಡ್, 10.29 ಲಕ್ಷ ಕೋವ್ಯಾಕ್ಸಿನ್ ದೊರೆಯಲಿದೆ’ ಎಂದು ಅಮಿಕಸ್ ಕ್ಯೂರಿ ವರದಿಯಲ್ಲಿ ತಿಳಿಸಿದ್ದಾರೆ.

‘ಹೆಚ್ಚುವರಿ ಡೊಸ್ ಕೋರಿ ಕೇಂದ್ರ ಸರ್ಕಾರಕ್ಕೆ ಕೂಡಲೇ ಮನವಿ ಸಲ್ಲಿಸಬೇಕು. ಕೋವಿಡ್ ಮುಂಚೂಣಿ ಯೋಧರ ಕುಟುಂಬದ 18ರಿಂದ 44 ವರ್ಷದೊಳಗಿನ ಸದಸ್ಯರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡುವ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಪೀಠ ತಿಳಿಸಿತು. ಕೋವಿಡ್ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.