ADVERTISEMENT

ಪುಸ್ತಕ ವಿತರಣೆಗೆ ಸಮಯ ಕೇಳಿದ ಸರ್ಕಾರ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 20:42 IST
Last Updated 30 ಆಗಸ್ಟ್ 2021, 20:42 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸಲು ಸಮಯಾವಕಾಶ ಬೇಕು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಶೇ 54.7ರಷ್ಟು ವಿದ್ಯಾರ್ಥಿಗಳಿಗೆ ಈಗಾಗಲೇ ಪುಸ್ತಕ ವಿತರಿಸಲಾಗಿದೆ, ಉಳಿದ ‍ಪುಸ್ತಕಗಳ ಮುದ್ರಣ ಕಾರ್ಯ ಪ್ರಗತಿಯಲ್ಲಿದೆ ಎಂದು ವಿವರಿಸಿತು.

ಶೇ 70.8ರಷ್ಟು ಪಠ್ಯ ಪುಸ್ತಕ ಈಗಾಗಲೇ ವಿತರಣೆಯಾಗಿದೆ. ಬಾಕಿ ಪುಸ್ತಕಗಳ ಮುದ್ರಣಕ್ಕೆ 20 ದಿನಗಳ ಕಾಲಾವಕಾಶ ಬೇಕಾಗಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ಅವರಿದ್ದ ವಿಭಾಗೀಯ ಪೀಠಕ್ಕೆ ಸರ್ಕಾರದ ವಕೀಲರು ವಿವರ ಸಲ್ಲಿಸಿದರು. ವಿಚಾರಣೆಯನ್ನು ಪೀಠ ಮುಂದೂಡಿತು.

ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ಕುಟುಂಬಗಳ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಪೀಠ, ಪಠ್ಯಪುಸ್ತಕ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಈ ಹಿಂದಿನ ವಿಚಾರಣೆ ವೇಳೆ ಗಮನ ಸೆಳೆದಿತ್ತು. 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಕೂಡಲೇ ಪುಸ್ತಕ ವಿತರಿಸಬೇಕು ಎಂದು ಸೂಚಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.