ADVERTISEMENT

ನಾಡಗೀತೆ ವಿವಾದ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2024, 18:19 IST
Last Updated 19 ಏಪ್ರಿಲ್ 2024, 18:19 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ಕಾಲ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಲಾದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ರಾಜ್ಯ ಸರ್ಕಾರ 2023ರ ಸೆಪ್ಟೆಂಬರ್ 25ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ತೀರ್ಪು ಕಾಯ್ದಿರಿಸಿತು.

ADVERTISEMENT

ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಹಾಗೂ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎಸ್‌.ಎ.ಅಹ್ಮದ್‌ ವಾದ ಮುಕ್ತಾಯಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.