ADVERTISEMENT

ಯಶ್ ಮನೆ ಖಾಲಿ ಮಾಡಲು ಎರಡು ತಿಂಗಳ ಸಮಯಾವಕಾಶ ನೀಡಿ ಹೈಕೋರ್ಟ್ ಆದೇಶ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2019, 11:11 IST
Last Updated 29 ಮಾರ್ಚ್ 2019, 11:11 IST
   

ಬೆಂಗಳೂರು:ಚಿತ್ರನಟ ಯಶ್ ವಾಸ ಮಾಡುತ್ತಿರುವ ಬಾಡಿಗೆ ಮನೆ ಖಾಲಿ ಮಾಡಲು ಮೇ ಅಂತ್ಯದವರೆಗೆ ಕಾಲಾವಕಾಶ ನೀಡಿ ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ಯಶ್ ತಾಯಿ ಪುಷ್ಪಾ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಪುಷ್ಪಾ ಅವರ ಪರ ವಕೀಲರು ಮನೆ ಖಾಲಿ ಮಾಡಲು ಆರು ತಿಂಗಳ ಕಾಲಾವಕಾಶ ಕೋರಿದರು. ಆದರೆ, ಇದಕ್ಕೆ ಮನೆ ಮಾಲೀಕರ ಪರ ವಕೀಲರು ವಿರೋಧ ವ್ಯಕ್ತಪಡಿಸಿದರು.

ADVERTISEMENT

ಇದಕ್ಕೆ ನ್ಯಾಯಪೀಠವು, ಮನೆ ಖಾಲಿ ಮಾಡಲು ಎರಡು ತಿಂಗಳ ಸಮಯ ನೀಡಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.