ADVERTISEMENT

ಸುಳ್ಳು ವೈದ್ಯಕೀಯ ವರದಿ ನೀಡಿದ್ದ ಆರೋಪ: ವೈದ್ಯರ ವಿರುದ್ಧ ತನಿಖೆಗೆ HC ಆದೇಶ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2025, 23:30 IST
Last Updated 20 ಮಾರ್ಚ್ 2025, 23:30 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಹಲ್ಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರಿಗೆ ಉಂಟಾದ ಗಾಯದ ಬಗ್ಗೆ ವಿಭಿನ್ನ ಹಾಗೂ ಸುಳ್ಳು ವೈದ್ಯಕೀಯ ವರದಿ ನೀಡಿದ್ದ ಆರೋಪದಡಿ ಇಬ್ಬರು ವೈದ್ಯರ  ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಹೈಕೋರ್ಟ್‌ ನಿರ್ದೇಶಿಸಿದೆ.

‘ಭದ್ರಾವತಿಯ ಮಂಜುನಾಥ್‌ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ನಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ದಾವಣಗೆರೆ ವಕೀಲ ಎಚ್‌.ವಿ.ರಾಮದಾಸ್‌ ಸೇರಿದಂತೆ ಆರು ಜನ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿಂತೆ ಆದೇಶಿಸಿದೆ.

‘ಇಂತಹ ಬೆಳವಣಿಗೆಯನ್ನು ಪರಿಶೀಲನೆಗೆ ಒಳಪಡಿಸದೆ ಹೋದರೆ ಅಪ್ರಾಮಾಣಿಕ ಶಕ್ತಿಗಳಿಗೆ ಮತ್ತಷ್ಟು ಬಲ ಬಂದಂತಾಗುತ್ತದೆ. ಆದ್ದರಿಂದ, ಪ್ರಕರಣದಲ್ಲಿ ಸುಳ್ಳು ವೈದ್ಯಕೀಯ ವರದಿ ನೀಡಿರುವ ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯ ಡಾ.ಪ್ರವೀಣ್ ಮತ್ತು ರೇಡಿಯಾಲಜಿಸ್ಟ್ ಡಾ.ಸುಮಿತ್ರಾ ವಿರುದ್ಧ ಇಲಾಖಾ ತನಿಖೆ ನಡೆಸಬೇಕು’ ಎಂದು ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ. ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.