ADVERTISEMENT

ಕೌಟುಂಬಿಕ ಕಾಯ್ದೆಯಡಿ ಜೀವನಾಂಶ ಹೆಚ್ಚಳ ಸಾಧ್ಯವಿಲ್ಲ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2022, 18:15 IST
Last Updated 28 ಫೆಬ್ರುವರಿ 2022, 18:15 IST
   

ಬೆಂಗಳೂರು: ‘ಪತಿಯಿಂದ ಪರಿತ್ಯಕ್ತಗೊಂಡ ಮಹಿಳೆಗೆ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ - 2015ರ ಅಡಿ ನಿಗದಿಪಡಿಸಲಾದ ಜೀವನಾಂಶವನ್ನು ಅಪರಾಧ ದಂಡ ಸಂಹಿತೆ (ಸಿಆರ್‌ಪಿಸಿ) ಕಲಂ 127ರ ಅಡಿಯಲ್ಲಿ ಹೆಚ್ಚಳ ಮಾಡಲು ಸಾಧ್ಯವಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ಕುರಿತಂತೆ ಶಿವಾನಂದ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.

‘ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಜೀವನಾಂಶ ನಿಗದಿಪಡಿಸಿದರೆ ಅದೇ ಕಾಯ್ದೆಯಲ್ಲಿ ಅದರ ಹೆಚ್ಚಳಕ್ಕೆ ಅವಕಾಶವಿಲ್ಲ. ಸಿಆರ್‌ಪಿಸಿಯಲ್ಲಿ ಜೀವನಾಂಶ ನಿಗದಿಯಾಗಿದ್ದರೆ ಮಾತ್ರ ಅದೇ ಕಾಯ್ದೆಯ ಬೇರೆ ಕಲಂನಲ್ಲಿ ಹೆಚ್ಚಳಕ್ಕೆ ಅವಕಾಶವಿದೆ. ಹೀಗಾಗಿ ಈ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸುವ ಆದೇಶ ಕಾನೂನು ಬಾಹಿರವಾಗಿದೆ’ ಎಂದು ನ್ಯಾಯಪೀಠ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.