ADVERTISEMENT

ವಿಜಯನಗರ ಜಿಲ್ಲೆ ಘೋಷಣೆ: ಹೈಕೋರ್ಟ್‌ನಲ್ಲಿ ಪಿಐಎಲ್

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 19:31 IST
Last Updated 4 ಜನವರಿ 2021, 19:31 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ವಿಜಯನಗರ ಜಿಲ್ಲೆ ಘೋಷಣೆ ಮಾಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಬಳ್ಳಾರಿಯ ಕೆ.ಕೋಟೇಶ್ವರ ರಾವ್ ಅರ್ಜಿ ಸಲ್ಲಿಸಿದ್ದು, ‘2020 ಡಿ.14ರಂದು ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಗ್ರಾಮ ಪಂಚಾಯಿತಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವ ಸಂದರ್ಭದಲ್ಲಿ ಈ ಅಧಿಸೂಚನೆ ಹೊರಡಿಸಿರುವುದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಲಾಭವಾಗಿದೆ’ ಎಂದು ಅವರು ಆರೋಪಿಸಿದ್ದಾರೆ.

ಅಫಿಡವಿಟ್ ಸಲ್ಲಿಸಿದ ಸರ್ಕಾರದ ಪರ ವಕೀಲರು, ‘ಇದು ಕೇವಲ ಕರಡು ಅಧಿಸೂಚನೆ. ನೀತಿ ಸಂಹಿತೆ ಉಲ್ಲಂಘನೆಯಾಗಿದ್ದರೆ ರಾಜ್ಯ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿ. ಈಗಾಗಲೇ ಚುನಾವಣೆ ಮುಗಿದಿದೆ. ಈ ಸಂದರ್ಭದಲ್ಲಿ ಚುನಾವಣೆ ಮುಂದೂಡಲು ಕೋರಿರುವುದು ಅಪ್ರಸ್ತುತ’ ಎಂದು ಹೇಳಿದರು.

ADVERTISEMENT

ಅರ್ಜಿ ವಿಲೇವಾರಿ ಮಾಡಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರ ಮನವಿ ಆಧರಿಸಿ ನೀತಿ ಸಂಹಿತೆ ಉಲ್ಲಂಘನೆ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸುವಂತೆ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.