ADVERTISEMENT

ಬೀಡಾಡಿ ಪ್ರಾಣಿ ಸಂರಕ್ಷಣೆಗೆ ಏನು ಕ್ರಮ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 20:37 IST
Last Updated 14 ಜನವರಿ 2022, 20:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ’ಗೋ ಸಂರಕ್ಷಣೆ ಮಾಡಬೇಕು ಎಂದು ಸರ್ಕಾರ ಹೇಳುತ್ತಿದೆ. ಅದೇ ರೀತಿ ಬೀಡಾಡಿ ಪ್ರಾಣಿಗಳ ಸಂರಕ್ಷಣೆಯೂ ಅತ್ಯಗತ್ಯವಾಗಿದ್ದು, ಅದಕ್ಕಾಗಿ ಸರ್ಕಾರ ಏನು ಮಾಡುತ್ತಿದೆ‘ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

’ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ಗೋಶಾಲೆ ಆರಂಭಿಸಬೇಕು ಹಾಗೂ ಈಗಾಗಲೇ ಇರುವ ಗೋಶಾಲೆಗಳಿಗೆ ಮೇವು, ನೀರು, ಸೂಕ್ತ ಜಾಗ ಮತ್ತು ಆರೋಗ್ಯ ಸೌಲಭ್ಯ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು‘ ಎಂದು ಕೋರಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ’ಬೀಡಾಡಿ ಪ್ರಾಣಿಗಳ ಕಲ್ಯಾಣಕ್ಕಾಗಿ ಯೋಜನೆ ಜಾರಿಗೊಳಿಸಲಾಗಿದೆಯೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ. ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT