ಹೈಕೋರ್ಟ್
ಬೆಂಗಳೂರು: ‘ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳು ಅಕ್ಷಮ್ಯ. ಅದರಲ್ಲೂ ಸಮಾಜದ ದುರ್ಬಲ ವರ್ಗದ ಮಹಿಳೆಯರು ಮತ್ತು ಮಕ್ಕಳ ನಡೆಯುವ ಶೋಷಣೆಗಳನ್ನು ತಡೆಗಟ್ಟಲು ಇದ ಸಕಾಲ’ ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ಅಭಿಪ್ರಾಯಪಟ್ಟಿದೆ.
ಪರಿಶಿಷ್ಟ ಜಾತಿಗೆ ಸೇರಿದ ಶಾಲಾ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 37 ವರ್ಷದ ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿರುವ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಈ ರೀತಿಯ ಕೃತ್ಯಗಳಲ್ಲಿ ಭಾಗಿಯಾಗುವವರಿಗೆ ಕಠಿಣ ಸಂದೇಶ ರವಾನೆಯಾಗಬೇಕಾಗಿದೆ’ ಎಂದು ಹೇಳಿದೆ.
‘ಪರಿಶಿಷ್ಟ ಜಾತಿಗೆ ಸೇರಿದ ಸಂತ್ರಸ್ತರು ಪ್ರಬಲ ವ್ಯಕ್ತಿಗಳಿಂದ ಸುಲಭವಾಗಿ ಶೋಷಣೆಗೊಳಗಾಗುತ್ತಾರೆ. ಹೀಗಾಗಿ, ಇಂತಹ ವಿಷಯಗಳಲ್ಲಿ ಸಾರ್ವಜನಿಕ ಜಾಗೃತಿ ಅವಶ್ಯವಿದೆ. ಮಹಿಳೆಯರು ಮತ್ತು ಮಕ್ಕಳ ಮನಸ್ಸಿನಲ್ಲಿ ಆತ್ಮವಿಶ್ವಾಸ ಮೂಡುವಂತೆ ಮಾಡಬೇಕಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.