ADVERTISEMENT

‘ರಾಜಕೀಯ ಪಕ್ಷಗಳು ಎಸ್ಒಪಿ ಪಾಲಿಸಬೇಕು’

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 20:23 IST
Last Updated 18 ಫೆಬ್ರುವರಿ 2021, 20:23 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ರಾಜಕೀಯ ಪಕ್ಷಗಳು ರ್‍ಯಾಲಿಗಳ ಸಂದರ್ಭದಲ್ಲಿ ಕಡ್ಡಾಯವಾಗಿ ಕೋವಿಡ್ ಮಾರ್ಗದರ್ಶಿ ಸೂತ್ರಗಳನ್ನು(ಎಸ್‌ಒಪಿ) ಪಾಲಿಸಬೇಕು ಎಂದು ಹೈಕೋರ್ಟ್ ಹೇಳಿದೆ. ನ್ಯಾಯಾಲಯಕ್ಕೆ ಹಾಜರಾಗುವಂತೆ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್‌ ನಾಗರಾಜ್‌ ಅವರಿಗ ಮತ್ತೆ ನೋಟಿಸ್ ಜಾರಿಗೊಳಿಸಿದೆ.

ಲೆಟ್ಜ್‌ಕಿಟ್ ಫೌಂಡೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ರಾಜಕೀಯ ಪಕ್ಷಗಳು ರ್‍ಯಾಲಿ ಅಥವಾ ಸಭೆಗಳನ್ನು ನಡೆಸುವಾಗ ತಮ್ಮ ಕಾರ್ಯಕರ್ತರಿಗೆ ಕೋವಿಡ್ ನಿಯಮ ಪಾಲಿಸಲು ಸೂಚನೆ ನೀಡಬೇಕು. ಈ ಸಂಬಂಧ ಪಿಐಎಲ್‌ಗೆ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಮಾ.1ಕ್ಕೆ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.