ADVERTISEMENT

ಗ್ರಾಮ ಪಂಚಾಯಿತಿ ಚುನಾವಣೆ: ಎಸ್‌ಒಪಿಗೆ ಸಿದ್ಧತೆ

ಹೈಕೋರ್ಟ್‌ಗೆ ರಾಜ್ಯ ಚುನಾವಣಾ ಆಯೋಗ ಮಾಹಿತಿ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2020, 19:30 IST
Last Updated 27 ಆಗಸ್ಟ್ 2020, 19:30 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ರಾಜ್ಯದ 5,800 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಮಾರ್ಗದರ್ಶಿ ಸೂತ್ರಗಳನ್ನು(ಎಸ್‌ಒಪಿ) ಅಂತಿಮಗೊಳಿಸಲಾಗುತ್ತಿದೆ’ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.‌

ಚುನಾವಣಾ ಪ್ರಕ್ರಿಯೆ ನಡೆಸಲು ಆಯೋಗಕ್ಕೆ ಅಗತ್ಯ ಇರುವ ಹಣ ಬಿಡುಗಡೆ ಮಾಡುವಂತೆಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

‘ಎಲ್ಲಾ ಗ್ರಾಮ ಪಂಚಾಯಿತಿಗಳ ಅಂತಿಮ ಮತದಾರರ ಪಟ್ಟಿಯನ್ನು ಆ.31ರೊಳಗೆ ಪ್ರಕಟಿಸುವ ನಿರೀಕ್ಷೆಯಿದೆ. ಎಸ್‌ಒಪಿ ಸಿದ್ಧಪಡಿಸಿಕೊಡಲು ಆರೋಗ್ಯ ಇಲಾಖೆಯನ್ನು ಆಯೋಗ ಕೇಳಿತ್ತು. ಸದ್ಯದಲ್ಲೇ ಅಂತಿಮಗೊಳ್ಳಲಿದೆ’ ಎಂದು ಆಯೋಗದ ಪರ ವಕೀಲ ಕೆ.ಎನ್. ಫಣೀಂದ್ರ ತಿಳಿಸಿದರು.

ADVERTISEMENT

‘ಚುನಾವಣೆ ಪ್ರಕ್ರಿಯೆಗೆ ಸುಮಾರು ₹185 ಕೋಟಿ ಬೇಕಾಗಲಿದೆ. ಕೋವಿಡ್ ಕಾರಣದಿಂದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಹೆಚ್ಚುವರಿಯಾಗಿ ₹65 ಕೋಟಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ಅವರು ವಿವರಿಸಿದರು.

ಆಯೋಗದ ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಪರಿಗಣಿಸುವಂತೆ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿತು. ವಿಚಾರಣೆಯನ್ನು ಸೆ.18ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.