ADVERTISEMENT

ಕೌಟುಂಬಿಕ ವ್ಯಾಜ್ಯ: ನಟಿ ಕಾವ್ಯ ಗೌಡ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 14:49 IST
Last Updated 14 ಫೆಬ್ರುವರಿ 2026, 14:49 IST
   

ಬೆಂಗಳೂರು: ಕೌಟುಂಬಿಕ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಟಿ ಕಾವ್ಯ ಗೌಡ ಮತ್ತು ಅವರ ಪತಿ ಸೋಮಶೇಖರ್‌ ವಿರುದ್ಧದ ಎಫ್‌ಐಆರ್‌ ಹಾಗೂ ಪ್ರಕರಣದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಎಫ್‌ಐಆರ್‌ಗೆ ತಡೆ ನೀಡುವಂತೆ ಕೋರಿ ಕಾವ್ಯ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ಪ್ರಕರಣದ ತನಿಖೆಗೆ ಮಧ್ಯಂತರ ತಡೆ ನೀಡಿರುವ ನ್ಯಾಯಪೀಠ ಪೊಲೀಸರು ಹಾಗೂ ಪ್ರತಿವಾದಿ ಪ್ರೇಮಾ ಮತ್ತಿತರರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ. ಪ್ರಕರಣದಲ್ಲಿ ದೂರು– ಪ್ರತಿ ದೂರು ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.