ಕರ್ನಾಟಕ ಹೈಕೋರ್ಟ್
ಬೆಂಗಳೂರು: ‘ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ’ ಎಂದು ಶಂಕಿಸಿ ವ್ಯಕ್ತಿಯೊಬ್ಬನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿದ್ದ ಅಪರಾಧಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಅಪರಾಧಿಯಾಗಿರುವ ಫ್ರೇಜರ್ ಟೌನ್ ನಿವಾಸಿ ಆಸೀಫ್ (53) ಸೆಷನ್ಸ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘ಮೃತ ವ್ಯಕ್ತಿ ಇಮ್ರಾನ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವುದನ್ನು ಪ್ರತ್ಯಕ್ಷದರ್ಶಿ ಸಾಕ್ಷಿ ಹೇಳಿಕೆಯಲ್ಲಿ ದೃಢಪಡಿಸಿದ್ದಾರೆ. ಇಮ್ರಾನ್ ಸಾಯುವ ಮುನ್ನ ನೀಡಿರುವ ಹೇಳಿಕೆಯಲ್ಲೂ ಅಪರಾಧ ಎಸಗಿರುವುದು ಸಾಬೀತಾಗಿದೆ. ಆದ್ದರಿಂದ, ಸೆಷನ್ಸ್ ನ್ಯಾಯಾಲಯ ನೀಡಿರುವ ಶಿಕ್ಷೆಯ ತೀರ್ಪಿನಲ್ಲಿ ಮಧ್ಯಪ್ರವೇಶ ಮಾಡಲಾಗದು’ ಎಂದು ನ್ಯಾಯಪೀಠ ಹೇಳಿದೆ.
ಆಸಿಫ್‌ಗೆ ಕೊಲೆ ಆರೋಪದಡಿ ಜೀವಾವಧಿ ಶಿಕ್ಷೆ ವಿಧಿಸಿ ನಗರದ 26ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ 2022ರ ಅಕ್ಟೋಬರ್ 1ರಂದು ಆದೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.