
ಬೆಂಗಳೂರು: ‘ಮಂಜೂರಾದ ನಕ್ಷೆಗಳ ಭಾಗವಲ್ಲದ ಪರಿವರ್ತಿತ ಜಮೀನಿನಲ್ಲಿ ಗ್ರಾಹಕರು ನಿವೇಶನಗಳನ್ನು ಖರೀದಿಸುತ್ತಿರುವ ಪ್ರಕರಣ ಹೆಚ್ಚುತ್ತಿವೆ’ ಎಂದು ಆತಂಕ ವ್ಯಕ್ತಪಡಿಸಿರುವ ಹೈಕೋರ್ಟ್, ‘ಇಂತಹ ವಹಿವಾಟುಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಸಮಗ್ರ ಯೋಜನೆಯೊಂದನ್ನು ರೂಪಿಸುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟಿದೆ.
‘ಸ್ಥಿರಾಸ್ತಿಗೆ ಸಂಬಂಧಿಸಿ ದಂತೆ ಇ-ಖಾತಾ ನೀಡಲು ಹೊಳಲ್ಕೆರೆ ಟೌನ್ ಪಂಚಾಯಿತಿಗೆ ನಿರ್ದೇಶಿಸ ಬೇಕು’ ಎಂದು ಕೋರಿ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗ ಹೋಬಳಿ ನಂದಿಹಳ್ಳಿಯ ಯು.ಮಮತಾ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ಶಂಕರ ಎಸ್.ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘ಸೂಕ್ತ ಮಾರ್ಗಸೂಚಿ ಅಥವಾ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ–1961ರ ಕಲಂ 17(2ಬಿ) ಉದ್ದೇಶಕ್ಕೆ ಅನುಗುಣವಾಗಿ ಕ್ರಮಬದ್ಧಗೊಳಿಸುವ ಕಾರ್ಯವಿಧಾನ ವನ್ನು ರೂಪಿಸದ ಹೊರತು, ವೈಯಕ್ತಿಕ ಪ್ರಕರಣಗಳಲ್ಲಿ ನ್ಯಾಯಾಲಯಗಳು ಶಾಸನಬದ್ಧ ಆದೇಶವನ್ನು ಮೀರಿ ಕಾನೂನಿಗೆ ವಿರುದ್ಧವಾದ ನಿರ್ದೇಶನ ಗಳನ್ನು ನೀಡಲು ಸಾಧ್ಯವಿಲ್ಲ’ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.