ADVERTISEMENT

ಮಹಾರಾಷ್ಟ್ರ ಜೊತೆಗೆ ನೀರು ವಿನಿಮಯ ಒಪ್ಪಂದ: ಶೀಘ್ರವೇ ಸಭೆ

ಸಚಿವ ರಮೇಶ ಜಾರಕಿಹೊಳಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 18 ಮೇ 2020, 21:37 IST
Last Updated 18 ಮೇ 2020, 21:37 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಬೆಳಗಾವಿ: ಬೇಸಿಗೆಯಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೃಷ್ಣಾ ನದಿಗೆ ನೀರು ಹರಿಸುವ ಸಂಬಂಧ ಮಹಾರಾಷ್ಟ್ರದ ಜೊತೆಗೆ ‘ನೀರು ವಿನಿಮಯ ಒಪ್ಪಂದ’ ಮಾಡಿಕೊಳ್ಳುವ ಕುರಿತು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಉಭಯ ರಾಜ್ಯಗಳ ಪ್ರತಿನಿಧಿಗಳ ಉನ್ನತ ಮಟ್ಟದ ಸಭೆ ನಡೆಯಲಿದೆ.

ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಈ ಮಾಹಿತಿ ನೀಡಿದರು. ‘ಸಭೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಸಭೆಯ ಬಳಿಕವೇ ನೀರು ವಿನಿಮಯ ಒಪ್ಪಂದ ಕುರಿತು ಸರ್ಕಾರದ ತೀರ್ಮಾನ‌ ಪ್ರಕಟಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು.

‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತರ ಹಿತರಕ್ಷಣೆ ಮತ್ತು ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಅವರ ಆಶಯದಂತೆ ಕೆಲಸ ನಿರ್ವಹಿಸುತ್ತಿದ್ದು, ರಾಜ್ಯದ ಬಹುತೇಕ ಜಲಾಶಯಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಚರ್ಚೆ ನಡೆಸುತ್ತಿದ್ದೇನೆ. ಮುಂದಿನ ವಾರ ಮೈಸೂರು ಭಾಗದಲ್ಲಿ ಪ್ರವಾಸ ಮಾಡಲಿದ್ದೇನೆ‘ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.