ADVERTISEMENT

ಶಾಲೆಗಳಿಗೆ ಬೇಸಿಗೆ ರಜೆ ಅವಧಿ ಪರಿಷ್ಕೃರಣೆ: ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ರಜೆ

​ಪ್ರಜಾವಾಣಿ ವಾರ್ತೆ
Published 5 ಮೇ 2021, 8:16 IST
Last Updated 5 ಮೇ 2021, 8:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೋವಿಡ್ ಹೆಚ್ಚುತ್ತಿರುವ ಕಾರಣ ರಾಜ್ಯದಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ‌ ಸಂದರ್ಭವನ್ನು ಗಮನದಲ್ಲಿರಿಸಿ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.

ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ತಿಳಿಸಿದಂತೆ ಏ. 27ರಿಂದ ಜೂನ್‌ 14ರವರೆಗೆ ಬೇಸಿಗೆ ರಜೆ ನೀಡಲಾಗಿದೆ. ಜೂನ್‌ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೆ, ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ನೀಡಲಾಗಿದೆ.

2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಜೂನ್‌ 1ರಿಂದ 14ರವರೆಗೆ ಪುನರ್‌ ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಮಕ್ಕಳಿಗೆ ಜೂನ್‌ 21ರಿಂದ ಜುಲೈ 5ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ.

ADVERTISEMENT

ಪ್ರೌಢ ಶಾಲೆಗಳ 8, 9, 10ನೇ ವಿದ್ಯಾರ್ಥಿಗಳಿಗೆ ಜೂನ್‌ 15ರಿಂದ 2021–22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

‘ಬೇಸಿಗೆ ರಜೆ ಅವಧಿಯಲ್ಲಿ‌ ಪ್ರೌಢಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು., ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.