ADVERTISEMENT

ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ರಜೆ

​ಪ್ರಜಾವಾಣಿ ವಾರ್ತೆ
Published 5 ಮೇ 2021, 20:00 IST
Last Updated 5 ಮೇ 2021, 20:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಶಾಲೆಗಳನ್ನು ಈಗಾಗಲೇ ಮುಚ್ಚಿದ್ದು, 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.

ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ಪ್ರಕಟಿಸಿದಂತೆ ಜೂನ್‌ 14ರವರೆಗೆ ರಜೆ ನೀಡಲಾಗಿದೆ. ಈ ತರಗತಿಗಳಿಗೆ ಜೂನ್‌ 15 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಮಾತ್ರ ರಜೆ ನೀಡಲಾಗಿದೆ. ಈ ಶಾಲೆಗಳಲ್ಲಿ 8 ರಿಂದ 10ರವರೆಗಿನ ತರಗತಿಗಳು ಜೂನ್‌ 15 ರಿಂದ ಆರಂಭವಾಗಲಿದೆ.

ಜೂನ್‌ 1 ರಿಂದ 14ರವರೆಗೆ 2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪುನರ್‌ ಮನನ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ಜೂನ್‌ 21ರಿಂದ ಜುಲೈ 5ರವರೆಗೆ ನಿಗದಿಯಾಗಿವೆ.

ADVERTISEMENT

‘ಬೇಸಿಗೆ ರಜೆ ಅವಧಿಯಲ್ಲಿ‌ ಪ್ರೌಢ ಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು. ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.