ADVERTISEMENT

ನಿತ್ಯಾನಂದ ಸ್ವಾಮೀಜಿ ಪ್ರಕರಣ: ಸೆಷನ್ಸ್ ಕೋರ್ಟ್ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2019, 12:55 IST
Last Updated 12 ಡಿಸೆಂಬರ್ 2019, 12:55 IST
   

ಬೆಂಗಳೂರು:ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಪ್ರಕರಣ ಕುರಿತ ರಾಮನಗರ ಸೆಷನ್ಸ್ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿದೆ.

ರಾಮನಗರದ ಸೆಷನ್ಸ್ ಕೋರ್ಟ್‌‌ನಲ್ಲಿ ಸೂಕ್ತವಾಗಿ ವಿಚಾರಣೆ ಆಗದ ಕಾರಣ ಪ್ರಕರಣವನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕೆಂದು ಕೋರಿ‌ ದೂರುದಾರ ಲೆನಿನ್ ಹೈಕೋರ್ಟ್‌‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದು, ಗುರುವಾರಈಅರ್ಜಿ ವಿಚಾರಣೆ ನಡೆಸಿದ ಪೀಠ ಪ್ರಕರಣಕ್ಕೆ ಸಂಬಂಧಿಸಿದ ರಾಮನಗರ ಕೋರ್ಟ್ ನಲ್ಲಿರುವ ಎಲ್ಲಾ ದಾಖಲೆಗಳನ್ನು ಹಾಜರುಪಡಿಸಲು‌ ರಿಜಿಸ್ಟ್ರಾರ್ ಗೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.