
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್
ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್‌ಗಳು ಹಾಗೂ ಯುವಿಸಿಇಯಲ್ಲಿ ಎರಡು ಸಾವಿರ ಬೋಧಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉನ್ನತ ಶಿಕ್ಷಣ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.
ಪ್ರಥಮ ದರ್ಜೆ ಕಾಲೇಜುಗಳ 826 ಸಹಾಯಕ ಪ್ರಾಧ್ಯಾಕರು, ಪಾಲಿಟೆಕ್ನಿಕ್‌ಗಳ 941 ಉಪನ್ಯಾಸಕರು, ಎಂಜಿನಿಯರಿಂಗ್ ಕಾಲೇಜುಗಳ 186 ಸಹಾಯಕ ಪ್ರಾಧ್ಯಾಪಕರು ಹಾಗೂ ಯುವಿಸಿಇಯಲ್ಲಿ 47 ಬೋಧಕ ಹುದ್ದೆಗಳನ್ನು ಸರ್ಕಾರದ ನಿಯಮಾನುಸಾರ ಭರ್ತಿ ಮಾಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಾಲಕಾಲಕ್ಕೆ ಅನ್ವಯವಾಗುವ ಮೀಸಲಾತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಲ್ಯಾಣ ಕರ್ನಾಟಕ ವೃಂದಕ್ಕೆ ಮೀಸಲಿರಿಸಿರುವ ಹುದ್ದೆಗಳನ್ನು ನಿಯಮಾನುಸಾರ ವರ್ಗೀಕರಿಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಅಗತ್ಯ ವಿದ್ಯಾರ್ಹತೆ ಹಾಗೂ ನೇಮಕಾತಿ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.