ADVERTISEMENT

ಖಾನಾಪುರ ಹೆದ್ದಾರಿ ಕಾಮಗಾರಿ ವಿಳಂಬ: ಗುತ್ತಿಗೆದಾರರಿಗೆ ₹3.2 ಕೋಟಿ ದಂಡ

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 14:35 IST
Last Updated 26 ಜುಲೈ 2025, 14:35 IST
ನಿತಿನ್‌ ಗಡ್ಕರಿ
ನಿತಿನ್‌ ಗಡ್ಕರಿ   

ನವದೆಹಲಿ: ಬೆಳಗಾವಿ ಜಿಲ್ಲೆಯ ಖಾನಾಪುರದಿಂದ ಗೋವಾ ಗಡಿಯವರೆಗೆ (ಎನ್‌ಎಚ್‌ 748) ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬವಾಗಿರುವುದಕ್ಕೆ ಗುತ್ತಿಗೆದಾರರಿಗೆ ₹3.2 ಕೋಟಿ ದಂಡ ವಿಧಿಸಲಾಗಿದೆ ಎಂದು ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. 

ರಾಜ್ಯಸಭೆಯಲ್ಲಿ ಪ್ರಶ್ನೊತ್ತರ ಅವಧಿಯಲ್ಲಿ ಲಿಖಿತ ಉತ್ತರ ನೀಡಿರುವ ಸಚಿವರು, ದ್ವಿಪಥದ ಈ ಕಾಮಗಾರಿಯ ಉದ್ದ 52 ಕಿ.ಮೀ ಗುತ್ತಿಗೆದಾರರಿಂದಾಗಿ ಕಾಮಗಾರಿ ವಿಳಂಬವಾಗಿದೆ. ಈ ವರೆಗೆ ಶೇ 72 ಕೆಲಸ ಮುಗಿದಿದೆ. ಮುಂದಿನ ವರ್ಷದ ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಮುಗಿಯಲಿದೆ ಎಂದು ಮಾಹಿತಿ ನೀಡಿದ್ದಾರೆ. 

ಖಾನಾಪುರ ಭಾಗದಲ್ಲಿ 20.8 ಕಿ.ಮೀ ಕಾಮಗಾರಿ ಮುಗಿದಿದೆ. ಇಲ್ಲಿ ಬಳಕೆದಾರರ ಶುಲ್ಕ ಸಂಗ್ರಹಿಸಲಾಗುತ್ತಿದೆ. ಖಾನಾಪುರದಿಂದ ಕರ್ನಾಟಕದ ಗಡಿ ವರೆಗಿನ ಕಾಮಗಾರಿ ಪೂರ್ಣಗೊಳ್ಳದ ಕಾರಣಕ್ಕೆ ಬಳಕೆದಾರರ ಶುಲ್ಕ ಸಂಗ್ರಹಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.