ADVERTISEMENT

ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2022, 19:45 IST
Last Updated 25 ಮಾರ್ಚ್ 2022, 19:45 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಮೈಸೂರು: ‌‘ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೇನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆ ತಿರುಚಲಾಗಿದೆ’ ಎಂದು ಸಿದ್ದರಾಮಯ್ಯ ಟ್ವೀಟ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ.

‘ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ಗೌರವವಿದೆ. ಯಾರ ಬಗ್ಗೆಯೂ ಅಗೌರವದಿಂದ ನಡೆದುಕೊಂಡಿಲ್ಲ‌ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT