ADVERTISEMENT

ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿರುವುದು ಸ್ವಾಗತಾರ್ಹ: ನಳಿನ್ ಕುಮಾರ್ ಕಟೀಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಫೆಬ್ರುವರಿ 2022, 15:44 IST
Last Updated 8 ಫೆಬ್ರುವರಿ 2022, 15:44 IST
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್   

ಬೆಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯದ ಪ್ರೌಢಶಾಲೆ, ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿರುವುದನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದ್ದಾರೆ.

‘ಪ್ರೌಢಶಾಲೆ, ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 3 ದಿನ ರಜೆ ಘೋಷಿಸಿರುವುದು ಸ್ವಾಗತಾರ್ಹ. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಇದು ಉತ್ತಮ ಹೆಜ್ಜೆಯಾಗಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಯಾವುದೇ ಸಂಘರ್ಷಕ್ಕೆ ಆಸ್ಪದ ಕೊಡದೆ, ಶಾಂತಿ, ಸಾಮರಸ್ಯ ಸೌಹಾರ್ದತೆ ಉಳಿಸುವಲ್ಲಿ ಸಹಕರಿಸಬೇಕಾಗಿ ವಿನಂತಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಬುಧವಾರದಿಂದ ಮೂರು ದಿನ ರಾಜ್ಯದಲ್ಲಿ ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿರುವ ಮುಖ್ಯಮಂತ್ರಿ, ಶಾಂತಿ–ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.