ADVERTISEMENT

ಸುಹಾಸ್‌ ಹತ್ಯೆ: ಕುಟುಂಬಕ್ಕೆ ಪರಿಹಾರ ಘೋಷಿಸಿ, ಪ್ರಕರಣ NIAಗೆ ವಹಿಸಿ; ವಿಜಯೇಂದ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಮೇ 2025, 13:22 IST
Last Updated 2 ಮೇ 2025, 13:22 IST
<div class="paragraphs"><p>ವಿಜಯೇಂದ್ರ</p></div>

ವಿಜಯೇಂದ್ರ

   

(ಸಂಗ್ರಹ ಚಿತ್ರ)

ಬೆಂಗಳೂರು: ಬಜಪೆಯಲ್ಲಿ ನಡೆದ ಹಿಂದುತ್ವವಾದಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.

ADVERTISEMENT

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, 'ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯ ದುರ್ಘಟನೆ ಮರೆಯುವ ಮುನ್ನವೇ ಈ ಘಟನೆ ನಡೆದಿರುವುದು ಖಂಡನೀಯ. ಹಿಂದೂ ಕಾರ್ಯಕರ್ತ ಸುಹಾಸ್ ಅವರ ಬರ್ಬರ ಹತ್ಯೆಗೆ ಇಡೀ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ' ಎಂದು ಹೇಳಿದ್ದಾರೆ.

ಈ ಘಟನೆಯಿಂದಾಗಿ 'ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ರಾಜ್ಯದ ಜನತೆಗೆ, ಹಿಂದೂ ಸಂಘಟನೆಗಳು ಹಾಗೂ ಕಾರ್ಯಕರ್ತರಿಗೆ ಈ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸವಿಲ್ಲದಂತಾಗಿದೆ. ಬಿಜೆಪಿಯ ನಾಯಕರು ಸುಹಾಸ್ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆ ಕುಟುಂಬದ ಜೊತೆ ನಾವಿದ್ದೇವೆ ಎಂಬ ಅಭಯ ತುಂಬಿದ್ದೇವೆ. ಬಿಜೆಪಿ ವತಿಯಿಂದ ಆರ್ಥಿಕ ಸಹಾಯ ಮಾಡಿದ್ದೇವೆ' ಎಂದು ಪೋಸ್ಟ್‌ನಲ್ಲಿ ವಿಜಯೇಂದ್ರ ತಿಳಿಸಿದ್ದಾರೆ.

'ಈ ರೀತಿಯ ಘಟನೆ ನಡೆದಾಗ ರಾಜ್ಯ ಸರ್ಕಾರ ಎಂದೂ ನಮ್ಮ ಕಾರ್ಯಕರ್ತರ ಪರ ನಿಂತಿಲ್ಲ. ಈ ಸರ್ಕಾರಕ್ಕೆ ಮನುಷ್ಯತ್ವವಿದ್ದರೆ ಆ ಕುಟುಂಬಕ್ಕೆ ಪರಿಹಾರ ಘೋಷಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಆ ಕುಟುಂಬಕ್ಕೆ ನ್ಯಾಯ ಕೊಡಿಸಲಿ' ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.