ADVERTISEMENT

‘ಗೆಲುವಿಗಾಗಿ ಒಂದಾದ ಜೋಡೆತ್ತು’

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 12:56 IST
Last Updated 5 ಡಿಸೆಂಬರ್ 2019, 12:56 IST
ಬಿ.ಸಿ.ಪಾಟೀಲ ಮತ್ತು ಯು.ಬಿ. ಬಣಕಾರ
ಬಿ.ಸಿ.ಪಾಟೀಲ ಮತ್ತು ಯು.ಬಿ. ಬಣಕಾರ   

ಹಾವೇರಿ: ಕಳೆದ ಮೂರು ಚುನಾವಣೆಗಳಲ್ಲಿ ಪ್ರತಿಸ್ಪರ್ಧಿಗಳಾಗಿದ್ದ ಯು.ಬಿ. ಬಣಕಾರ ಮತ್ತು ನಾನು ಈ ಬಾರಿ ಒಂದಾಗಿದ್ದೇವೆ. ನಾವು ಒಂದಾದ ಮೇಲೆ ಬೇರೆಯವರು ಗೆಲ್ಲುತ್ತಾರೆ ಎಂಬ ಪ್ರಶ್ನೆಯೇ ಬರುವುದಿಲ್ಲ’ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಯತ್ತಿನಹಳ್ಳಿ ಗ್ರಾಮದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಕ್ಷೇತ್ರದಲ್ಲಿ ‘ಸುನಾಮಿ’ ರೀತಿ ಬದಲಾವಣೆಯಾಗಿದೆ. ಕ್ಷೇತ್ರದ ಜನರು ಪ್ರಜ್ಞಾವಂತರಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರುನಮ್ಮ ಕ್ಷೇತ್ರಕ್ಕೆ ₹ 250 ಕೋಟಿ ಅನುದಾನ ನೀಡಿದ್ದಾರೆ. ಸರ್ವಜ್ಞ ಏತ ನೀರಾವರಿ ಯೋಜನೆಗೆ ಅನುಮೋದನೆ ಸಿಕ್ಕಿದೆ. ರಾಜ್ಯದಲ್ಲಿ ಸ್ಥಿರ ಮತ್ತು ಸುಭದ್ರ ಸರ್ಕಾರ ಬೇಕಿದೆ. ಈ ಎಲ್ಲ ಕಾರಣಗಳಿಂದ ಜನರು ನನ್ನನ್ನು ಗೆಲ್ಲಿಸುತ್ತಾರೆ. 40 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT