ಬೆಂಗಳೂರು : ಶಾಸಕ ಡಿ. ಸುಧಾಕರ್ ಅವರು 2004ರಲ್ಲಿ ಸಾಮಾನ್ಯ ಕ್ಷೇತ್ರವಾಗಿದ್ದ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು.
2008ರಲ್ಲಿ ಚಳ್ಳಕೆರೆ ಕ್ಷೇತ್ರ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದರಿಂದ ಸಾಮಾನ್ಯ ಕ್ಷೇತ್ರವಾಗಿದ್ದ ಹಿರಿಯೂರಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಮೊದಲ ಬಾರಿಗೆ ಸಮಾಜ ಕಲ್ಯಾಣ ಹಾಗುಯ ಮುಜರಾಯಿ ಖಾತೆ ಸಚಿವರಾಗಿದ್ದರು. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಸುಧಾಕರ್ ಬಿಜೆಪಿಯಿಂದ ದೂರ ಉಳಿದಿದ್ದರು.
2013ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ ಆ ಬಾರಿ ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರು ಸಚಿವ ಸ್ಥಾನ ದೊರಕಲಿಲ್ಲ. 2018ರಲ್ಲಿ ಬಿಜೆಪಿಯ ಪೂರ್ಣಿಮಾ ಎದುರು ಪರಾಭವಗೊಂಡಿದ್ದರು. 2023ರಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಯದ ನಗೆ ಬೀರಿದರು. ಇದೇ ಮೊದಲ ಬಾರಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದಾರೆ.
ಸಚಿವರ ಕಿರು ಪರಿಚಯ
ಹೆಸರು : ಡಿ.ಸುಧಾಕರ್
ವಿದ್ಯಾರ್ಹತೆ : ಬಿ.ಕಾಂ
ವಯಸ್ಸು : 63
ಜಾತಿ : ಜೈನ
ಎಷ್ಟನೇ ಬಾರಿಗೆ ಶಾಸಕ : ನಾಲ್ಕನೇ ಬಾರಿಗೆ ಶಾಸಕ.
ಹಿಂದೆ ನಿರ್ವಹಿಸಿದ ಖಾತೆ : ಸಮಾಜ ಕಲ್ಯಾಣ ಹಾಗೂ ಮುಜರಾಯಿ ಖಾತೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.