ಬೆಂಗಳೂರು: ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದಂತೆ ಮಲೆನಾಡಿನ ಜಿಲ್ಲೆಗಳನ್ನು ಸೇರಿಸಿ ಮಲೆನಾಡು ಕರ್ನಾಟಕ ಎಂದು ಘೋಷಿಸಿ ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ನೀಡಬೇಕು ಎಂದು ಜೆಡಿಎಸ್‌ನ ಎಚ್.ಕೆ.ಕುಮಾರಸ್ವಾಮಿ ಒತ್ತಾಯಿಸಿದರು.
ವಿಧಾನಸಭೆಯಲ್ಲಿ ಶುಕ್ರವಾರ, ವಿವಿಧ ಇಲಾಖೆಗಳ ಅನುದಾನಗಳ ಬೇಡಿಕೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ರಾಜ್ಯದ ಇತರ ಭಾಗಗಳ ಅಭಿವೃದ್ಧಿಗೆ ಒತ್ತು ನೀಡಿರುವುದನ್ನು ಸ್ವಾಗತಿಸುತ್ತೇನೆ. ನಮ್ಮ ಭಾಗದಲ್ಲಿ ಅತಿ ಹೆಚ್ಚು ಮಳೆ ಆಗುವುದರಿಂದ ಪ್ರತಿ ವರ್ಷವೂ ರಸ್ತೆಗಳು ಹಾಳಾಗುತ್ತಿವೆ. ಇದಲ್ಲದೇ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಆಗಬೇಕಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.